ವಿಷಯಕ್ಕೆ ಹೋಗಿ
ಹೃದಯಾಘಾತದಿಂದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ವಿಧಿವಶರಾಗಿದ್ದಾರೆ. ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿನ ಡಾಲರ್ಸ್ ಕಾಲನಿ ನಿವಾಸದಲ್ಲಿ ಹೃದಾಯಘಾತವಾಗಿದ್ದು ತಕ್ಷಣ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ನಿಗಾ ಘಟಕದಲ್ಲಿ ಕತ್ತಿಗೆ ಚಿಕಿತ್ಸೆ ನೀಡಲಾಗಿತ್ತು . ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಇಡೀ ದಿನ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಇಂದು ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಮನೆಯವರು, ಅವರ ಸಹಾಯಕರು ಅವರನ್ನು ಅಲ್ಲಿಯೇ ಹತ್ತಿರದಲ್ಲಿದ್ದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಅವರನ್ನು ಪರೀಕ್ಷಿಸಿದ ವೈದ್ಯರು , ಸದ್ಯ ತುರ್ತು ನಿಗಾ ಘಟಕಕ್ಕೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 61 ವರ್ಷದ ಉಮೇಶ್ ಕತ್ತಿ ಬಿಜೆಪಿ ಹಿರಿಯ ನಾಯಕರು ಎಂದು ಗುರುತಿಸಿಕೊಂಡಿದ್ದರು.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು