ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ದರೂರ್ ಕೃಷ್ಣಾ ನದಿ ಸೇತುವೆ ತಿರುವು ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾದ ಘಟನೆ ನಡೆದಿದೆ .ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಹಲವು ಜನ ಗಾಯಗೊಂಡಿದ್ದಾರೆ.ಮೃತಪಟ್ಟ ಮಹಿಳೆಯನ್ನು ರಾಣಿ (ಅಕ್ಷತಾ)ಕನಮಡಿ ಎಂದು ಗುರುತಿಸಲಾಗಿದೆ.ಅಥಣಿ ತಾಲೂಕಿನ ಕಕಮರಿ ಗ್ರಾಮದಿಂದ ಚಿಂಚಲಿ ಮಾಯಕ್ಕ ದೇವಿ ದರ್ಶನಕ್ಕೆ ಭಕ್ತಾಧಿಗಳು ಟ್ರ್ಯಾಕ್ಟರ್ ನಲ್ಲಿ ಹೊರಟಿದ್ದಾಗ ಈ ದುರ್ಘಟನೆ ನಡೆದಿದೆ. ಸುಮಾರು 30 -40 ಜನ ಟ್ರ್ಯಾಕ್ಟರ್ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಟ್ರ್ಯಾಕ್ಟರ್ ನದಿ ಪಕ್ಕದಲ್ಲಿ ಅವಘಡಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಅಥಣಿ ಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ .ಅಥಣಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ..
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು