ಮೂಡಲಗಿ : ಬರಲಿರುವ ಎಪ್ರೀಲ್-ಮೇ ತಿಂಗಳಲ್ಲಿ ಜರುಗಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಭಾರತದ ಪ್ರಧಾನಿಯಾಗಲು ಕಾರ್ಯಕರ್ತರು ಈಗಿನಿಂದಲೇ ಚುನಾವಣೆಯ ಸಿದ್ಧತೆಯಲ್ಲಿ ತೊಡಗಬೇಕು. ಈ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸಬೇಕು ಎಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.ಸೋಮವಾರದಂದು ತಾಲೂಕಿನ ಅರಭಾವಿ ವ್ಯಾಪ್ತಿಯ ಗೋಕಾಕ ಸಪ್ಲಾಯರ್ಸ್ ಕಲ್ಯಾಣ ಮಂಟಪದಲ್ಲಿ ಬಿಜೆಪಿಯಿಂದ ಜರುಗಿದ ಜಿಲ್ಲಾ ಮಟ್ಟದ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಪ್ರ-ಶಿಕ್ಷಣ ವರ್ಗದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಿಂದಾಗಿ ಇಡೀ ವಿಶ್ವ ಮಟ್ಟದಲ್ಲಿ ಭಾರತಕ್ಕೆ ಜನಮನ್ನಣೆ ದೊರೆತಿದೆ ಎಂದು ಪ್ರಧಾನಿಗಳ ಕಾರ್ಯಗಳನ್ನು ಶ್ಲಾಘಿಸಿದರು.ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೇಂದ್ರದ ಹಾಗೂ ರಾಜ್ಯದಲ್ಲಿ ನಮ್ಮ ಹಿಂದಿನ ಸರ್ಕಾರದ ಸಾಧನೆಗಳನ್ನು ಕಾರ್ಯಕರ್ತರು ಮತದಾರರ ಮನೆ ಮನೆಗೆ ತಲುಪಿಸುವ ಕಾರ್ಯಗಳನ್ನು ಕೈಗೊಳ್ಳಬೇಕು. ಬರುವ ತಾಪಂ ಹಾಗೂ ಜಿಪಂ ಚುನಾವಣೆಗಳಲ್ಲಿಯೂ ನಮ್ಮ ಪಕ್ಷದ ಅಭ್ಯರ್ಥಿಗಳು ಜಯಗಳಿಸಲು ಕಾರ್ಯಕರ್ತರು ದುಡಿಯಬೇಕು ಎಂದು ಹೇಳಿದರು.ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿತ್ತು. ಆದರೆ ಮತದಾರರು ನಮ್ಮ ಬದಲಾಗಿ ಬೇರೊಂದು ಪಕ್ಷವನ್ನು ಅಧಿಕಾರಕ್ಕೆ ತಂದರು. ನಮ್ಮ ಸರ್ಕಾರವಿದ್ದಾಗ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿತ್ತು. ಆದರೀಗ ಕಾಂಗ್ರೇಸ್ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಪ್ರತಿಯೊಬ್ಬ ಭಾರತೀಯನ ಕನಸಾಗಿರುವ ಅಯೋಧ್ಯೆಯ ರಾಮ ಮಂದಿರವು ಬರುವ ಜನೇವರಿ 22 ರಂದು ಲೋಕಾರ್ಪಣೆಗೊಳ್ಳಲಿದೆ. ಈ ಮೂಲಕ ನಾವು ಜನತೆಗೆ ನೀಡಿರುವ ಎಲ್ಲ ಆಶ್ವಾಸನೆಗಳನ್ನು ಈಡೇರಿಸುತ್ತಿದ್ದೇವೆ. ಪ್ರಧಾನಿಗಳ ದೂರದೃಷ್ಟಿಯ ನಾಯಕತ್ವದಿಂದ ನಮ್ಮ ದೇಶವು ವಿಶ್ವಮಾನ್ಯವಾಗಿ ಬೆಳೆಯುತ್ತಿದೆ. ಜೊತೆಗೆ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕೆಂಬುದು ಕೋಟ್ಯಾಂತರ ಜನರ ಆಶಯವಾಗಿದೆ ಎಂದು ತಿಳಿಸಿದರು.ಬಿಜೆಪಿಯು ಅತೀ ಶಿಸ್ತಿನ ಹಾಗೂ ಸಂಘಟನಾತ್ಮಕ ಗುಣಗಳನ್ನು ಮೈಗೂಡಿಸಿಕೊಂಡಿರುವ ವಿಶ್ವದ ಅತೀ ದೊಡ್ಡ ಪಕ್ಷವಾಗಿದೆ. ನಮ್ಮ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಮನ್ನಣೆ ಯಾವ ಪಕ್ಷದಲ್ಲಿಯೂ ಇಲ್ಲ. ಹೀಗಾಗಿ ಕಾರ್ಯಕರ್ತರಿಗೆ ಸಕಲ ಗೌರವ ನೀಡುತ್ತಿರುವ ಬಿಜೆಪಿಯನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಜನರ ಕಲ್ಯಾಣಕ್ಕಾಗಿ ಮೋದಿಯವರು ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ರಾಜ್ಯ ಪ್ರಶಿಕ್ಷಣ ಪ್ರಕೋಷ್ಠ ಸಂಚಾಲಕ ಹಾಗೂ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ವಿಭಾಗ ಸಹ-ಸಂಘಟನಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಗೋಕಾಕ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಸ್ವಾಗತಿಸಿದರು. ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸದಸ್ಯ ಶಶಿಕಾಂತ ವಿಶ್ವಬ್ರಾಹ್ಮಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಾಧ್ಯಮ ಸಂಚಾಲಕ ಎಫ್.ಎಸ್. ಸಿದ್ದನಗೌಡ ಕಾರ್ಯಕ್ರಮ ನಿರೂಪಿಸಿದರು.ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳ ಸದಸ್ಯರುಗಳು ಪ್ರಶಿಕ್ಷಣ ವರ್ಗದಲ್ಲಿ ಭಾಗಿಯಾಗಿದ್ದರು. ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಅವರು ಪಕ್ಷದ ಇತಿಹಾಸ, ಸಿದ್ಧಾಂತ ಮತ್ತು ಸಮನ್ವಯದ ಬಗ್ಗೆ ಮಾತನಾಡಿದರು. ಮಾಜಿ ಶಾಸಕ ಪಿ. ರಾಜೀವ ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಗಳು ಮತ್ತು ಅನುಷ್ಠಾನ ಹಾಗೂ ನರೇಂದ್ರ ಮೋದಿ ಅವರ ನಾಯಕತ್ವದ ಬಗ್ಗೆ ಮಾತನಾಡಿದರು. ಸಾಮಾಜಿಕ ಜಾಲತಾಣದ ರಾಜ್ಯ ಸಹ ಸಂಚಾಲಕ ಪ್ರಶಾಂತ ಜಾಧವ ಅವರು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮ ನಿರ್ವಹಣೆ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ ಅವರು ಸಾಮಾನ್ಯ ಶಿಷ್ಠಾಚಾರ ಹಾಗೂ ಕುಶಲ ಜನಪ್ರತಿನಿಧಿಗಳ ಬಗ್ಗೆ ಮಾತನಾಡಿದರು. ವರದಿ ಸಂತೋಷ್ ಹೆಗಡೆ 7411155439

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ರಾಯಬಾಗ : ಇಂದು ನಾವು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. 1947 ರ ಆಗಸ್ಟ್ 15 ರಂದು ನಾವು ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ದಿನವನ್ನು ಸ್ಮರಿಸುತ್ತೇವೆ. ಈ ದಿನವನ್ನು ಆಚರಿಸುವಾಗ, ನಾವು ನಮ್ಮ ದೇಶಕ್ಕಾಗಿ ಹೋರಾಡಿದ ಎಲ್ಲ ಮಹಾನ್ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುತ್ತೇವೆ.ಭಾರತವು ಒಂದು ಬೃಹತ್ ಮತ್ತು ವೈವಿಧ್ಯಮಯ ದೇಶ. ನಾವು ಅನೇಕ ಭಾಷೆಗಳು, ಸಂಸ್ಕೃತಿಗಳು ಮತ್ತು ಧರ್ಮಗಳನ್ನು ಹೊಂದಿದ್ದೇವೆ, ಆದರೆ ನಾವು ಒಂದೇ ರಾಷ್ಟ್ರದ ಭಾಗವಾಗಿದ್ದೇವೆ. ನಮ್ಮೆಲ್ಲರನ್ನೂ ಒಂದುಗೂಡಿಸುವ ಅಂಶವೆಂದರೆ ನಮ್ಮ ದೇಶದ ಮೇಲಿನ ಪ್ರೀತಿ ಮತ್ತು ಗೌರವ.ಸ್ವಾತಂತ್ರ್ಯವೆಂದರೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಇದು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವನ್ನು ಒಳಗೊಂಡಿದೆ. ನಾವು ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಬೇಕು. ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ರಾಯಬಾಗ ಅಧ್ಯಕ್ಷರಾದ ಉಮೇಶ ಭೂಪಾಲ ಪೋಳ ಹೇಳಿದರು, ಅವರು ರಾಯಬಾಗ ಸರ್ಕಾರಿ ನೌಕರರ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು ತಿಳಿಸುತ್ತಾ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ್ ಕದ್ದು, ರಾಜ್ಯ ಪರಿಷತ್ ಸದಸ್ಯರಾದ ಮಲಿಕಜಾನ್ ಕೊರ್ಬು, ಸಂಘಟನಾ ಕಾರ್ಯದರ್ಶಿ ಕಲ್ಲಪ್ಪ ಗುಡಿಮನಿ, ನಾಮ ನಿರ್ದೇಶಿತ ನಿರ್ದೇಶಕರಾದ ಭಗವಂತ ಮಸಾಲಜಿ, ನಿಂಗಪ್ಪ ಬೀರಣಗಡ್ಡಿ, ಸದಾಶಿವ ಕಾಂಬಳೆ, ಪರಶುರಾಮ ಕುಂಬಾರ, ಸವಿತಾ ಜೋಲಾಪೂರೆ, ಮತ್ತಿತರು ಹಾಜರಿದ್ದರು.