ವಿಷಯಕ್ಕೆ ಹೋಗಿ
ಅಥಣಿ:- ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದು ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ.ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವರದಿ :ಪ್ರಶಾಂತ್ ಸತ್ತಿ, ಅಥಣಿ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು