ವಿಷಯಕ್ಕೆ ಹೋಗಿ
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿಯವರ ಆಪ್ತನನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.ಲಕ್ಷ್ಮಣ ಸವದಿಯವರ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬುವವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಫರಾರಿಯಾಗಿದ್ದಾರೆ.ಅಣ್ಣಪ್ಪ ಬಸಪ್ಪ ನಿಂಬಾಳ ಇವರು ನಿನ್ನೆ ಸಂಜೆ ಗ್ರಾಮದಲ್ಲಿರುವ ದೇವಸ್ಥಾನಕ್ಕೆ ಹೋಗಿ ಬರುವಾಗ ಅಣ್ಣಪ್ಪ ಅವರ ಮೇಲೆ ಏಕಾಏಕಿ ದಾಳಿ ಮಾಡಿ ಮಾರಕಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿದ್ದಾರೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅನ್ನಪ್ಪ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಮರಣ ಹೊಂದಿದರು ಎಂದು ತಿಳಿದುಬಂದಿದೆ .ಅಣ್ಣಪ್ಪ ಬಸಪ್ಪ ನಿಂಬಾಳ ಅವರ ಕೊಲೆ ಹಿಂದಿನ ನಿಖರ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡಸಿದ್ದಾರೆ.ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವರದಿ :- ಮುಕೇಶಕುಮಾರ್ ಲಂಬುಗೊಳ್, ಅಥಣಿ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು