ವಿಷಯಕ್ಕೆ ಹೋಗಿ
ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಮಾಂಜರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಯಡೂರ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಅಣ್ಣಾ ಹುಕ್ಕೇರಿ ಅವರ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಯಿತು.ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರು ಮತದಾನ ನಮ್ಮೆಲ್ಲರ ಹಕ್ಕು ಹಾಗೂ ಜವಾಬ್ದಾರಿ. ನಮ್ಮ ಒಂದು ಮತಕ್ಕೆ ದೇಶದ ಆಡಳಿತ ವ್ಯವಸ್ಥೆ ಬದಲಿಸುವ ಶಕ್ತಿ ಇದೆ. ನಮ್ಮ ದೇಶದ ಭವಿಷ್ಯ ಹಾಗೂ ಅಭಿವೃದ್ಧಿಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಕುಮಾರಿ ಪ್ರಿಯಾಂಕಾ ಸತೀಶ ಜಾರಕಿಹೊಳಿ ಅವರಿಗೆ ಮತ ನೀಡಿ ಪ್ರಚಂಡ ಬಹುಮತಗಳಿಂದ ಆರಿಸಿ ತರಬೇಕೆಂದು ಕೇಳಿಕೊಂಡರು.ಈ ಸಂಧರ್ಭದಲ್ಲಿ ಸ್ಥಳೀಯ ಮುಖಂಡರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಸದಸ್ಯರು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ವರದಿ :- ಶ್ರೀಕಾಂತ್ ಅಸೋದೆ, ಮಾಂಜರಿ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು