ವಿಷಯಕ್ಕೆ ಹೋಗಿ
ಅಥಣಿ:- ವಿಪತ್ತು ಹಾಗೂ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಅತ್ಯುತ್ತಮ ಸೇವೆಯನ್ನ ಸಲ್ಲಿಸಿದ ಅನಿಲ ಕುಮಾರ್ ಬಡಚಿ ಅವರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಒಲಿದು ಬಂದಿದೆ.ಅಗ್ನಿ ಅವಗಡ ಮತ್ತು ವಿಪತ್ತು ಮತ್ತು ತುರ್ತು ಸೇವೆಗಳ ಸಂದರ್ಭದಲ್ಲಿ ನಾಗರಿಕರ ಜೀವ ರಕ್ಷಣೆ ಹಾಗೂ ಆಸ್ತಿ ಸಂರಕ್ಷಣಾ ಕಾರ್ಯದಲ್ಲಿ ತಮ್ಮ ಪ್ರಾಣದ ಹಂಗನ್ನು ತೊರೆದು ಅತ್ಯುತ್ತಮ ಸೇವೆ ಸಲ್ಲಿಸಿದ ಅಗ್ನಿಶಾಮಕ ಮತ್ತು ಅಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಮುಖ್ಯ ಮಂತ್ರಿ ಚಿನ್ನದ ಪದಕವನ್ನ ಮಂಗಳವಾರ ಬೆಂಗಳೂರಿನ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಗಿತ್ತು ಅದರಲ್ಲಿ ಬೆಳಗಾವಿ ಜಿಲ್ಲೆಯ ಅಥಣಿಯ ಅಗ್ನಿಶಾಮಕ ದಳದ ಸಿಬ್ಬಂದಿಯಾದ ಅನಿಲ ಬಡಚಿ ಅವರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮುಖ್ಯಮಂತ್ರಿ ಚಿನ್ನದ ಪದಕ ನೀಡಿ ಸನ್ಮಾನಿಸಿದ್ದು ಇಡೀ ಅಥಣಿಯ ಜನತೆ ಹೆಮ್ಮೆಯ ಪಡುವ ಸಂಗಾತಿಯಾಗಿದೆ.. ವರದಿ :ಪ್ರಶಾಂತ್ ಸತ್ತಿ ಅಥಣಿ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು