ರಾಯಬಾಗ :.ಕರ್ನಾಟಕ ರಾಜ್ಯ ( 6 - 8 ) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ ( ರಿ ), ತಾಲೂಕ ಘಟಕ ರಾಯಬಾಗ ಇದರ ಆಶ್ರಯದಲ್ಲಿ ಡಾ ಬಾಬು ಜಗಜೀವನರಾಮ ಸಭಾ ಭವನದಲ್ಲಿ ಇಂದು ನೂತನ ಜಿ ಪಿ ಟಿ ಶಿಕ್ಷಕರ ಸ್ವಾಗತ ಸಮಾರಂಭ ಹಾಗೂ ಸರ್ವ ಸದಸ್ಯರ ಮಹಾಸಭೆ ನಡೆಯಿತು.ಈ ಸಂದರ್ಭದಲ್ಲಿ ಈ ಸಮಾರಂಭದ ಅಧ್ಯಕ್ಷತೆ ಹಾಗೂ ಉದ್ಘಾಟಕರು ಡಿ ಎಂ ಐಹೊಳೆ ಶಾಸಕರು ರಾಯಬಾಗ. ಕುಮಾರ ಮಾದರ ಉಪನ್ಯಾಸಕರು ಡಯಟ್ ಚಿಕ್ಕೋಡಿ. ವಸಂತ ಬೆಕ್ಕೇರಿ ಉಪನ್ಯಾಸಕರು ಸರ್ಕಾರಿ ಪದವಿಪೂರ್ವ ಕಾಲೇಜು ಹಳ್ಳೂರು. ಮುಖ್ಯ ಅತಿಥಿಗಳ ಬಸವರಾಜ ಆರ್ BEO ರಾಯಬಾಗ. ಬಸವರಾಜ ಕಾಂಬಳೆ BRC ಪವನ್ ಅಮಠೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳು. ಮಹಮ್ಮದ್ ಮಾಗಿ ರಾಜ್ಯ ಸಹ ಕಾರ್ಯದರ್ಶಿಗಳು. ಗೋವಿಂದ ಸಣ್ಣಕ್ಕಿ ಜಿಲ್ಲಾ ಅಧ್ಯಕ್ಷರು. ಸತ್ರಾಜ್ ಕಾಂಬಳೆ ರಾಯಬಾಗ್ ತಾಲೂಕ ಅಧ್ಯಕ್ಷರು ಸ್ಥಾನಗಳನ್ನು ಅಲಂಕರಿಸಿದ್ದರು."ವಿಷಯವನ್ನು ತಲೆಗೆ ತುರುಕದೆ ಮನಸ್ಸಿಗೆ ತರಬೇತಿ ನೀಡುವ ಲಕ್ಷಾಂತರ ಶಿಕ್ಷಕರ ಸೇವೆ ಭಾರತಕ್ಕೆ ಅವಶ್ಯಕವಾಗಿದೆ", ಈ ನಿಟ್ಟಿನಲ್ಲಿ ತಾವೆಲ್ಲರೂ ಶಿಕ್ಷಕರಾಗಿ ಬಂದಿದ್ದೀರಿ ಶಿಕ್ಷಕರ ಮೂಲ ಉದ್ದೇಶ ಮಗುವಿನ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವುದೇ ಮೂಲ ಉದ್ದೇಶವಾಗಿದೆ ಮಗುವಿನ ಸಂಪೂರ್ಣ ಸರ್ವತೋಮುಖ ವಿಕಾಸ ಮಾಡುವ ಅವಕಾಶ ತಮಗೆ ಒದಗಿ ಬಂದಿರುವಂತಹ ಸದಾ ಅವಕಾಶವನ್ನು ಓದು ಬರಹ ಲೆಕ್ಕ ವಿದ್ಯಾರ್ಜನೆಯನ್ನು ಮಾಡಿಸಿ ತಮ್ಮ ಬದುಕಿನ ಸಾರ್ಥಕತೆಯನ್ನು ಪಡೆಯಿರಿ ಎಂದು ಕುಮಾರ್ ಮಾದರ ಉಪನ್ಯಾಸಕರು ಜಿಪಿಟಿ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದರು.ಜಿ ಪಿ ಟಿ ಶಿಕ್ಷಕನಾಗಿ ನಾನು ಕೆಲಸ ಮಾಡಿದ್ದೇನೆ ಜಿಪಿಟಿ ಎಂಬುದು ಹೊಸ ಕೇಡರ್ ಶಿಕ್ಷಕರ ವೃಂದ ಇದು ಹುಟ್ಟುತ್ತಲೇ ಕೆಲವು ಸಮಸ್ಯೆಗಳನ್ನು ಹೊತ್ತುಕೊಂಡು ಬಂದಿದೆ ಆ ಒಂದು ನಿಟ್ಟಿನಲ್ಲಿ ಮಕ್ಕಳಿಗೆ ನಾವು ಏನು ಕೊಡಬೇಕಾಗಿದೆಯೋ ಅದನ್ನೆಲ್ಲವನ್ನು ದಾರೆಯೇರಿಯುವುದರೊಂದಿಗೆ ನಮ್ಮೀ ಸಮಸ್ಯೆಗಳನ್ನ ಸಂಘಟನೆಯ ಮುಖಾಂತರ ನ್ಯಾಯಾಲಗಳ ಮೆಟ್ಟಿಲೇರಿ ಪರಿಹರಿಸಿಕೊಳ್ಳೋಣ ವಸಂತ ಬೆಕ್ಕೇರಿ ಉಪನ್ಯಾಸಕರು ಜಿಪಿಟಿ ಶಿಕ್ಷಕರಿಗೆ ತಿಳಿಹೇಳಿದರು.ಈ ಸಂದರ್ಭದಲ್ಲಿ ರಾಯಬಾಗ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಸವರಾಜಪ್ಪ ಆರ್ ಇವರು ಜಿಪಿಟಿ ಶಿಕ್ಷಕರಿಗೆ ಶಾಲೆಯ ಅಭಿವೃದ್ಧಿಗಾಗಿ ಮಕ್ಕಳ ಶಿಕ್ಷಣದ ಗುಣಮಟ್ಟಕ್ಕಾಗಿ ಪ್ರತಿಯೊಬ್ಬರೂ ಸೈನಿಕರಾಗಿ ಕೆಲಸ ಮಾಡಿ ಅಕ್ಷರದ ಕ್ರಾಂತಿಯನ್ನು ಮಾಡಿ ಜನ ಮೆಚ್ಚಿದ ಶಿಕ್ಷಕರಾಗಬೇಡಿ ಮಗುಮೆಚ್ಚಿದ ಶಿಕ್ಷಕರಾಗಿ ಆಗ ಎಲ್ಲರೂ ಗೌರವಿಸುತ್ತಾರೆ. ಎಲ್ಲರೂ ಉಳಿಯುವಿಗಾಗಿ ಹೋರಾಟ ಮಾಡಿ ಆ ಹೋರಾಟ ಇನ್ನೊಬ್ಬರಿಗೆ ಮಾರಕವಾಗಬಾರದು ಎಂದು ಜಿಪಿಟಿ ಶಿಕ್ಷಕರಿಗೆ ತಿಳಿ ಹೇಳಿದರು ಅದೇ ರೀತಿ ಸಮಾಗಮದಿಂದ ಒಂದಾಗಿ ಮಕ್ಕಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಸ್ಪರ್ಧೆ ಮಾಡೋಣ ನಮ್ಮ ನಮ್ಮಲ್ಲಿಯೇ ಸ್ಪರ್ಧೆ ಬೇಡವೇ ಬೇಡ ಶಾಲೆಗಳನ್ನು ಪ್ರಗತಿಯ ಪತದತ್ತ ತೆಗೆದುಕೊಂಡು ಹೋಗೋಣ ಎಂದರು.ಈ ಸಂದರ್ಭದಲ್ಲಿ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಪದವೀಧರ ಶಿಕ್ಷಕರ ಸಂಘದ ಪದಾಧಿಕಾರಿಗಳು ರಾಯಬಾಗ್ ತಾಲೂಕ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಈ ಸಮಾರಂಭದ ಕೇಂದ್ರ ಬಿಂದುವಾದ ಪದವೀಧರ ಪ್ರಾಥಮಿಕ ಶಿಕ್ಷಕರೆಲ್ಲರೂ ಉಪಸ್ಥಿತರಿದ್ದರು.ವರದಿ - ರಮೇಶ್ ಕಾಂಬಳೆ, ರಾಯಬಾಗ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಮಾದಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಒಂದೇ ದಿನದಲ್ಲಿ ಎರಡೆರಡು ಕಾರ್ಯಕ್ರಮ ಗಳನ್ನು ನಡೆಸಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಮದಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು,ಸಿಬ್ಬಂದಿ ವರ್ಗ ಸರ್ವ ಸದಸ್ಯ ಮಂಡಳಿ ಮೊದಲನೆಯದ್ದು "ಜಮಾಬಂದಿ ಕಾರ್ಯಕ್ರಮ" ಎರಡನೆಯದು "ಕಾವಲು ಸಮಿತಿ ಸಭೆ" ಹೀಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿ ಮದಿಹಳ್ಳಿ ಗ್ರಾಮವನ್ನು ಅಭಿವೃದ್ಧಿಯ ಹಾದಿಯತ್ತ ಕರೆದೊಯ್ಯಲು ಶ್ರಮಿಸುತ್ತಿರುವ ಮಾದಿಹಳ್ಳಿ ಗ್ರಾಮ ಪಂಚಾಯತ ಆಡಳಿತ ಮಂಡಳಿ ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿಗಳಾದ ಸುರೇಶ ತಳವಾರ, ಅಧ್ಯಕ್ಷರಾದ ಲಕ್ಕವ್ವ ಬಾಗಿ, ಉಪಾಧ್ಯಕ್ಷರಾದ ಕೋಮಲ್ ಹೊಸಮನಿ, ಪಶು ವೈದ್ಯಾಧಿಕಾರಿ ರಮೇಶ್ ಕದಮ, ಅಂಗನವಾಡಿ ಮೇಲ್ವಿಚಾರಕರು ಜಿ. ಎನ್. ಮಾನಗಾವಿ, ಸದಸ್ಯರಾದ ಮಾನಿಕ ಬಾಗಿ, ಗಣಪತಿ ವಾಳಕಿ, ಕಾಶಪ್ಪ ಮುತಗಿ, ಶಿವಾಜಿ ಗಾಡಿವಡ್ಡರ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.