ವಿಷಯಕ್ಕೆ ಹೋಗಿ
ಬೆಂಗಳೂರು: ವಯೋಸಹಜ ಕಾಯಿಲೆಯಿಂದ ತಡರಾತ್ರಿ ಇಹಲೋಕ ತ್ಯಜಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ನಾಳೆ (ಡಿ.11) ಹುಟ್ಟೂರಿನಲ್ಲಿ.ಬೆಂಗಳೂರಿನಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಇರಲಿದೆ. ಬಳಿಕ ಅವರ ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಅಂತ್ಯಕ್ರಿಯೆ. ವಿದೇಶದಿಂದ ಅವರ ಪುತ್ರಿ ಮತ್ತು ಅಂತ್ಯ ಬರಬೇಕಾಗಿರುವಾಗ ನಾಳೆ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದ ಮೂಲಗಳು ತಿಳಿಸಿವೆ.ಎಸ್.ಎಂ. ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣ ಅವರು ಇತ್ತೀಚಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಸಿಕೊಳ್ಳದ ಹಿನ್ನೆಲೆ ಸದಾಶಿವ ನಗರದಲ್ಲಿರುವ ಅವರ ನಿವಾಸದಲ್ಲಿಯೇ ಚಿಕಿತ್ಸೆ ನೀಡಲಾಗುತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 2.30 ರ ಹೊತ್ತಿಗೆ ವಿಧಿವಶರಾದರು ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಜೊತೆಗೆ, ರಾಜಕೀಯ ಜೀವನದಲ್ಲಿ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರಾಗಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ಜೊತೆಗೆ, ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 2023 ರಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಲಾಗಿದೆ.ಅಕ್ಷರ ದಾಸೋಹದ ಹರಿಕಾರರೂ ಇನ್ನಿಲ್ಲ, ಇನ್ನೂ ಅವರ ಸವಿ ನೆನಪು ಮಾತ್ರ.ವರದಿ : ರಮೇಶ ಕಾಂಬಳೆ
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು