ವಿಷಯಕ್ಕೆ ಹೋಗಿ
ಅಥಣಿ : ದ್ವಿಚಕ್ರ ವಾಹಣಕ್ಕೆ ಅಪರಿಚಿತ ವಾಹನ ಡಿಕ್ಕಿಹೊಡೆದ ಪರಿಣಾಮ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಅನಂತಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ನಾಗನೂರ ಪಿ ಎ ಗ್ರಾಮದ ಅಶೋಕ ಸನದಿ (48) ಮೃತ ದುರ್ದೈವಿ. ಅನಂತಪುರ ಗ್ರಾಮದಿಂದ ತಾoವಶಿ ಮಾರ್ಗವಾಗಿ ಸಾಗುವ ವೇಳೆ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಕಳೆದು 20 ವರ್ಷಗಳಿಂದ ವಿವಿಧ ಗ್ರಾಮ ಪಂಚಾಯತ ಕಾರ್ಯಾಲಯಗಳಲಿ ಸೇವೆಯಲಿದ್ದು ಕಳೆದು 6 ತಿಂಗಳಿಂದ ಅನಾರೋಗ್ಯದ ಕಾರಣ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ವೈಯಕ್ತಿಕ ಕೆಲಸದ ನಿಮಿತ್ಯ ಅನಂತಪುರ ಗ್ರಾಮಕ್ಕೆ ಹೋದ ಅಶೋಕ ಮನೆಗೆ ಬರುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನದ ಹಿಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಹಿಂಬದಿಯಿಂದ ಯಾರೋ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ವೃತದೇಹವನ್ನು ಮರನೊತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು