ವಿಷಯಕ್ಕೆ ಹೋಗಿ
ಚಿಕ್ಕೋಡಿ : ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರ 47ನೇ ಜನ್ಮದಿನದ ಪ್ರಯುಕ್ತ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ ಪ್ರಕಾಶ ಅಣ್ಣಾ ಹುಕ್ಕೇರಿ ಅವರ ಮಾರ್ಗದರ್ಶನದಲ್ಲಿ, ಚಿಕ್ಕೋಡಿಯ ಪರಟಿ ನಾಗಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಚರಣಮೂರ್ತಿ ಮಠದ ಶ್ರೀ ಸಂಪಾದನಾ ಮಹಾಸ್ವಾಮಿಗಳು ಹಾಗೂ ಜೋಡಕುರಳಿ ಮಠದ ಶ್ರೀ ಚಿದ್ಭಾನಂದ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು. ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿಲಾದ ಕಾಲೇಜ್ ಬ್ಯಾಗ್ ವಿತರಣಾ ಕಾರ್ಯಕ್ರಮ ಅತಿ ವಿಜೃಂಭಣೆಯಿಂದ ನೆರವೇರಿತು. ಈ ಸಮಯದಲ್ಲಿ ಗಣೇಶ್ ಅಣ್ಣಾ ಹುಕ್ಕೇರಿ ಅವರ ಎಲ್ಲ ಅಭಿಮಾನಿ ಬಳಗದವರು ಉಪಸ್ಥಿತರಿದ್ದರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆನ್ನೆಲುಬುವಾದಂತಹ ಶಿಕ್ಷಣಕ್ಕೆ ಉತ್ತೇಜನ ನೀಡುವ ಈ ಕಾರ್ಯಕ್ರಮ, ಸಮಾಜಮುಖಿ ಚಿಂತನೆಯ ದಿಕ್ಕಿನಲ್ಲಿ ಮುಂದುವರೆದ ಸಾರ್ಥಕ ಹೆಜ್ಜೆಯಾಗಿದೆ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು