ವಿಷಯಕ್ಕೆ ಹೋಗಿ
"ರಕ್ಷಾ ಬಂಧನ"....ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ನೂಲ ಹುಣ್ಣಿಮೆಯಂದು ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ. ರಾಖಿಯನ್ನು ಸಹೋದರಿ ಸಹೋದರನ ಮಣಿಕಟ್ಟಿಗೆ ಕಟ್ಟುತ್ತಾರೆ. ಜೊತೆಗೆ ಸಹೋದರ ತನ್ನ ಸಹೋದರಿಗೆ ಉಡುಗೊರೆಯನ್ನು ನೀಡುತ್ತಾರೆ .ಭಾರತದಲ್ಲಿ, ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯವನ್ನು ಬಲಪಡಿಸುವ ಹಬ್ಬವೆಂದರೆ ರಕ್ಷಾ ಬಂಧನ . ಶ್ರಾವಣ ಮಾಸದ ನೂಲ ಹುಣ್ಣಿಮೆಯ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಆಗಸ್ಟ್ 09 ರಂದು ರಕ್ಷಾಬಂಧನವನ್ನು ಆಚರಿಸಲಾಗುತ್ತಿದೆ.ಪ್ರತಿ ಸಹೋದರಿಯು ಪ್ರತಿವರ್ಷ ತನ್ನ ಸಹೋದರರ ಮಣಿಕಟ್ಟಿನ ಮೇಲೆ ‘ ರಾಖಿ ’ಎಂದು ಕರೆಯಲ್ಪಡುವ ಪವಿತ್ರ ದಾರವನ್ನು ಕಟ್ಟಲು ಕಾಯುತ್ತಾಳೆ.ರಕ್ಷಾಬಂಧನಕ್ಕೆ ಭಾರತದಲ್ಲಿ ಹೆಚ್ಚು ಮಹತ್ವವಿದೆ. ಇದನ್ನು ಹಬ್ಬದಂತೆ ಆಚರಿಸಲಾಗುತ್ತದೆ. ಸಹೋದರ - ಸಹೋದರಿಯರ ನಡುವಿನ ಪ್ರೀತಿಗೆ ಈ ದಿನ ಸಮರ್ಪಣೆಯಾಗಿದೆ. ಹಿಂದೂ ಧರ್ಮದಲ್ಲಿ ರಕ್ಷಾ ಬಂಧನಕ್ಕೆ ಹೆಚ್ಚು ಪ್ರಾಮುಖ್ಯತೆ ಇದೆ. ರಕ್ಷಾ ಬಂಧನ ರಕ್ಷೆ (ರಕ್ಷಣೆ) ಹಾಗೂ ಬಂಧನ (ಸಂಬಂಧ) ಎಂಬ ಎರಡು ಪದಗಳಿಂದ ಕೂಡಿದೆ. ಪ್ರಸ್ತುತ, ಈ ಹಬ್ಬವು ಸಹೋದರ-ಸಹೋದರಿಯರ ನಡುವಿನ ಪ್ರೀತಿ ಮತ್ತು ಬಂಧದ ಸಮಾನಾರ್ಥಕವಾಗಿದೆ ಮತ್ತು ಇದು ಸಹೋದರಿ ಮತ್ತು ಸಹೋದರರ ನಡುವಿನ ಪ್ರೀತಿಯನ್ನು ಬಲಪಡಿಸುವ ಉತ್ಸವವಾಗಿದೆ. ಒಂದು ಕಡೆ, ಸಹೋದರನು ತನ್ನ ಸಹೋದರಿಯನ್ನು ನೋಡಿಕೊಳ್ಳುವುದಾಗಿ ಮತ್ತು ತನ್ನ ಜೀವನಪರ್ಯಂತ ಅವಳನ್ನು ರಕ್ಷಿಸುವುದಾಗಿ ಭರವಸೆ ನೀಡುತ್ತಾನೆ. ಮತ್ತೊಂದೆಡೆ, ಸಹೋದರಿ ತನ್ನ ಸಹೋದರನ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತಾಳೆ.ಈ ದಿನ, ಸಹೋದರಿ ತನ್ನ ಸಹೋದರರ ಮಣಿಕಟ್ಟಿನ ಮೇಲೆ ಕಟ್ಟುವ ರೇಷ್ಮೆ ದಾರವು ಕೇವಲ ಒಂದು ದಾರವಲ್ಲ. ಅದು ಇಬ್ಬರ ನಡುವಿನ ಶುದ್ಧ, ಪವಿತ್ರ ಮತ್ತು ನಿರಂತರ ಪ್ರೀತಿಯ ಗುರುತು, ಜೊತೆಗೆ ಶಾಶ್ವತ ರಕ್ಷಣೆಗಾಗಿ ಮಂತ್ರದೊಂದಿಗೆ ಬೆರೆತಿದೆ. ಸಹೋದರಿ ಮದುವೆಯಾದಾಗಲೂ, ಸಹೋದರಿಯರ ಮನೆಗೆ ಭೇಟಿ ನೀಡಿ ಮತ್ತು ಆಕೆಯಿಂದ ರಾಖಿಯನ್ನು ಕಟ್ಟಿಸಿಕೊಳ್ಳುವುದನ್ನು ಮರೆಯುವುದಿಲ್ಲ......
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು