ವಿಷಯಕ್ಕೆ ಹೋಗಿ
ರಾಯಬಾಗ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ರಾಯಬಾಗ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು "ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ" ಯನ್ನು ದಿನಾಂಕ: 01-10-2025 ರಿಂದ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿರುವುದು ತಮಗೆಲ್ಲ ತಿಳಿದಿದೆ.ಪತಿ-ಪತ್ನಿ ಇಬ್ಬರೂ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು.ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ. 17,000/- ಗಳಿಂದ ರೂ. 27,000/- ಸಾವಿರಗಳಿಗೆ ಹೆಚ್ಚಳ ಮಾಡಿದೆ.ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.ಮಾಸಿಕ ವಂತಿಕೆಯನ್ನು ನೀಡಲು ಇಚ್ಚಿಸದೇ ಇರುವ ನೌಕರರು ಲಿಖಿತವಾಗಿ ದಿನಾಂಕ: 18-10-2025 ರೊಳಿಗೆ ಸಂಬಂಧಿಸಿದ ಡಿ.ಡಿ.ಓ.ಗಳಿಗೆ ನೀಡುವುದು.ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಅಕ್ಟೋಬರ್-2025ನೇ ಮಾಹೆಯಿಂದ ನೀಡುವುದು.ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ.ಈ ಯೋಜನೆಗೆ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರು HRMS-1ರಲ್ಲಿ ನೋಂದಣಿ ಮಾಡಿಕೊಳ್ಳಲು ಕ್ರಮವಹಿಸುವುದು.ಎಂದು ರಾಯಬಾಗ ತಾಲೂಕು ಅಧ್ಯಕ್ಷ ಉಮೇಶ ಭೂಪಾಲ ಪೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು