ವಿಷಯಕ್ಕೆ ಹೋಗಿ
ರಾಯಬಾಗ : ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಬೆಳಗಾವಿ ರವರ ಆದೇಶದ ಪ್ರಕಾರ ದಿನಾಂಕ:30.12.2025 ರಂದು ಮಂಗಳವಾರ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರಿಂದ ಆಸ್ತಿ ತೆರಿಗೆ ವಸೂಲಾತಿಗಾಗಿ "ಮೇಗಾ ತೆರಿಗೆ ವಸೂಲಾತಿ ಅಭಿಯಾನ" ಹಮ್ಮಿಕೊಂಡಿದ್ದು. ಗ್ರಾಮ ಪಂಚಾಯಿತಿ ಸಿಬ್ಬಂದಿಯವರು ಆಯಾ ಗ್ರಾಮಗಳಲ್ಲಿ ದಿನಾಂಕ:30.12.2025 ಮಂಗಳವಾರ ಆಸ್ತಿ ತೆರಿಗೆ ವಸೂಲಾತಿಗೆ ಮನೆಗಳಿಗೆ ಭೇಟಿ ನೀಡಿದಾಗ ತೆರಿಗೆ ಬಗ್ಗೆ ಖಾತ್ರಿ ಮಾಡಿಕೊಂಡು ತೆರಿಗೆ ಸಂದಾಯ ಮಾಡಲು ಹಾಗೂ ಸಿಬ್ಬಂದಿಗೆ ಸಹಕಾರ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಪ್ರಭಾರ ಸಹಾಯಕ ನಿರ್ದೇಶಕರಾದ ಉಮೇಶ ಭೂಪಾಲ ಪೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು