ಚಿಕ್ಕೋಡಿ : ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ತಿಮ್ಮವ್ವಗೋಳ ಮತ್ತು ಸಹ ಶಿಕ್ಷಕ ಕದಮ ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಚಿಕ್ಕೋಡಿ ಉಪ ನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆಯ ಕಾರ್ಯಾಲಯದ ಎದುರು ಧರಣಿ ಸತ್ಯಾಗ್ರಹ ನಡೆಸಿ ಉಪ ನಿರ್ದೇಶಕ ಸೀತಾರಾಮ ಅವರಿಗೆ ಮನವಿ ಅರ್ಪಿಸಿದರು. ಕಳೆದ ಹಲವು ವರ್ಷಗಳಿಂದ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿರುವ ಅಶೋಕ ತಿಮ್ಮವ್ವಗೋಳ ಮತ್ತು ಸಹ ಶಿಕ್ಷಕ ನಾಮದೇವ ಕದಮ್ ಅವರು ಶಾಲೆಯ ಪರಿಸರವನ್ನು ಸಂಪೂರ್ಣ ಹಾಳುಗೆಡವಿದ್ದಾರೆ. ಶಾಲಾ ಕೊಠಡಿಗಳಲ್ಲಿ ಅಳವಡಿಸಲಾಗಿರುವ ಪ್ಯಾನ್ ಗಳು ಸಂಪೂರ್ಣ ಹಾಳಾಗಿದ್ದು, ಸ್ವಿಚ್ ಬೋರ್ಡಗಳು ತೀರಾ ಹದಗೆಟ್ಟವೆ. ಇದರಿಂದ ವಿದ್ಯಾರ್ಥಿಗಳ ಶಾಲಾ ಕೊಠಡಿಯಲ್ಲಿ ವಿದ್ಯಾಭ್ಯಾಸ ಮಾಡಲು ತೊಂದರೆಯಾಗುತ್ತಿದೆ. ಶಾಲೆಯ ಕೊಠಡಿಗಳಲ್ಲಿ ಎಲ್ಲಿ ಬೇಕಲ್ಲಿ ಕಸ ಶೇಖರಿಸಿ ಇಡಲಾಗಿದೆ. ಬಹುಮುಖ್ಯವಾಗಿ ಬಿಸಿಯೂಟದಲ್ಲಿ ಭಾರಿ ಗೋಲಮಾಲ್ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಕೊಡುವ ಬಾಳೆಹಣ್ಣು, ತರಕಾರಿ ಮತ್ತು ಬೇಳೆ ಕಾಳುಗಳು ಸಮರ್ಪಕವಾಗಿ ಬಳಕೆ ಮಾಡಲಾಗುತ್ತಿಲ್ಲ. ಪಕ್ಕದ ಘಟಪ್ರಭಾ ಗ್ರಾಮದಲ್ಲಿ ತಾಜಾ ತರಕಾರಿ ಮಾರುಕಟ್ಟೆ ಇದ್ದರೂ ಸಹ ಮುಖ್ಯೋಪಾಧ್ಯಾಯ ತಿಮ್ಮವ್ವಗೋಳ ಆಗಲಿ ಅಡುಗೆ ಜವಾಬ್ದಾರಿ ಪಡೆದಿರುವ ಸಹ ಶಿಕ್ಷಕ ನಾಮದೇವ ಕದಮ ಅಲ್ಲಿಗೆ ಹೋಗಿ ತರಕಾರಿ ತರದೆ ಮಕ್ಕಳಿಗೆ ಕೊಳೆತ ತರಕಾರಿಗಳನ್ನು ತಂದು ಬಳಸುತ್ತಿದ್ದಾರೆ. ಇದರಿಂದ ಮಕ್ಕಳ ಆರೋಗ್ಯದಲ್ಲಿ ಏರುಪೇರು ಆದ ನಿದರ್ಶನಗಳು ಹಲವಾರಿವೆ. ಅದೇ ತರನಾಗಿ ಅಡುಗೆ ಕೋಣೆಯಲ್ಲಿಯೂ ಸಹ ಕಸ ಕಡ್ಡಿಗಳು ಬಿದ್ದು ಸಂಪೂರ್ಣ ಗಲಿಜಾಗಿರುತ್ತದೆ.**ಮುಖ್ಯೋಪಾಧ್ಯಾಯ ಅಶೋಕ್ ತಿಮ್ಮವ್ವಗೋಳ ಬಂದಾಗಿನಿಂದ ಶಾಲೆಯ ಫಲಿತಾಂಶ ಸಂಪೂರ್ಣ ಹದಗೆಟ್ಟಿದೆ. 2021 ರಲ್ಲಿ 100ಕ್ಕೆ 100 ರಷ್ಟಿದ್ದ ಫಲಿತಾಂಶ 22 ರಲ್ಲಿ 95%, 23ರಲ್ಲಿ 92% ,24 ರಲ್ಲಿ 61% ಮತ್ತು 25 ರಲ್ಲಿ 53% ಈ ರೀತಿ ಕುಸಿಯುತ್ತಾ ಬಂದಿದೆ. ಹಾಗಾಗಿ ಕಳೆದ 7 ವರ್ಷದಿಂದ ಪಾಮಲದಿನ್ನಿ ಸರಕಾರಿ ಪ್ರೌಢಶಾಲೆ ಸಂಪೂರ್ಣ ಹದಗೆಟ್ಟು ಹೋಗಿದೆ. 8 ನೇ ತರಗತಿಯ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ತಲಾ 300 ರೂಪಾಯಿ ಮತ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣ ಪತ್ರ ನೀಡಲು ತಲಾ 100 ರೂಪಾಯಿ ಹಣವನ್ನು ರಾಜಾರೋಷವಾಗಿ ಪಡೆಯುತ್ತಾನೆ.ಜಿ.ಪಂ ಬೆಳಗಾವಿ ಸನ್ 2021-22ನೇ ತಾ‌.ಪಂ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಪಾಮಲದಿನ್ನಿ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ 4.90 ಲಕ್ಷ ರೂ ವೆಚ್ಚದಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಟ್ಟಿದ್ದು, ಅದನ್ನು ಸಹ ಸರ್ಮಪಕವಾಗಿ ಬಳಕೆ ಮಾಡಿಕೊಳ್ಳದೆ ಸಂಪೂರ್ಣ ಹಾಳು ಗೆಡವಿದ್ದಾರೆ. ಹಾಗಾಗಿ ಇದಕ್ಕೆ ಕಾರಣಿಕೃತರಾದ ಶಾಲೆಯ ಮುಖ್ಯೋಪಾಧ್ಯಾಯ ಅಶೋಕ್ ತಿಮ್ಮವ್ವಗೋಳ ಮತ್ತು ಸಹ ಶಿಕ್ಷಕ ನಾಮದೇವ ಕದಮ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಅವರಿಗೆ ತಕ್ಷಣದಿಂದ ಸೇವೆಯಿಂದ ಅಮಾನತು ಮಾಡಬೇಕು ಎಂದು ಕರವೇ ವತಿಯಿಂದ ಮನವಿಯಲ್ಲಿ ವಿನಂತಿಸಲಾಗಿದೆ . ಇದಕ್ಕೆ ತಪ್ಪಿದಲ್ಲಿ ಮಾನ್ಯ ಅಪರ ಆಯಕ್ತರು ಶಾಲಾ ಶಿಕ್ಷಣ ಇಲಾಖೆ ಧಾರವಾಡ ಇವರ ಕಛೇರಿಯ ಎದುರು ಸತ್ಯಾಗ್ರಹ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.* *ಪ್ರತಿಭಟನೆಯಲ್ಲಿ ಕರವೇ ಗೋಕಾಕ ತಾಲೂಕು ಅಧ್ಯಕ್ಷ ಬಸವರಾಜ ಖಾನಪ್ಪನವರ, ಕರವೇ ಚಿಕ್ಕೋಡಿ ತಾಲೂಕು ಅಧ್ಯಕ್ಷ ಸಂಜು ಬಡಿಗೇರ, ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ, ಜಿಲ್ಲಾ ಮಾಧ್ಯಮ ವಕ್ತಾರ ಸಾದಿಕ ಹಲ್ಯಾಳ, ಸಂತೋಷ ಪೂಜೇರಿ, ಪ್ರತಾಪಗೌಡ ಪಾಟೀಲ, ಮೋಹನ ಪಾಟೀಲ, ರಫೀಕ ಪಠಾಣ, ದೀಪಕ ಹಂಜಿ, ಮಲ್ಲು ಸಂಪಗಾರ, ಬಸ್ಸು ಗಾಡಿವಡ್ಡರ, ಹನುಮಂತ ಬಜಾನ, ಮಾರುತಿ ಹಂಜಿ, ರಾಮ ಕೊಗನೋಳಿ, ವಿಠ್ಠಲ ಹೊರಟ್ಟಿ, ಈರಪ್ಪ ರಾಜಾಪೂರೆ, ಸಿದ್ದು ಹಣಬರಟ್ಟಿ, ವಸಂತ ಹಂಜಿ, ಶಿವಾನಂದ ಮಸ್ತಿ, ಬಸ್ಸು ಡಬಾಜ, ಮಹಾದೇವ ಹಳ್ಳೂರ, ಬಸ್ಸು ಹಂಜಿ, ದಯಾನಂದ ಗಣೇಶವಾಡಿ, ವಿಠ್ಠಲ ರಾಜಾಪೂರೆ, ಪ್ರಿತಮ ಗಾಡಿವಡ್ಡರ, ರಾಮ ನಿರ್ವಾಣಿ, ಗುರು ಮುನ್ನೋಳಿಮಠ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ರಾಯಬಾಗ : ಇಂದು ನಾವು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. 1947 ರ ಆಗಸ್ಟ್ 15 ರಂದು ನಾವು ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ದಿನವನ್ನು ಸ್ಮರಿಸುತ್ತೇವೆ. ಈ ದಿನವನ್ನು ಆಚರಿಸುವಾಗ, ನಾವು ನಮ್ಮ ದೇಶಕ್ಕಾಗಿ ಹೋರಾಡಿದ ಎಲ್ಲ ಮಹಾನ್ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುತ್ತೇವೆ.ಭಾರತವು ಒಂದು ಬೃಹತ್ ಮತ್ತು ವೈವಿಧ್ಯಮಯ ದೇಶ. ನಾವು ಅನೇಕ ಭಾಷೆಗಳು, ಸಂಸ್ಕೃತಿಗಳು ಮತ್ತು ಧರ್ಮಗಳನ್ನು ಹೊಂದಿದ್ದೇವೆ, ಆದರೆ ನಾವು ಒಂದೇ ರಾಷ್ಟ್ರದ ಭಾಗವಾಗಿದ್ದೇವೆ. ನಮ್ಮೆಲ್ಲರನ್ನೂ ಒಂದುಗೂಡಿಸುವ ಅಂಶವೆಂದರೆ ನಮ್ಮ ದೇಶದ ಮೇಲಿನ ಪ್ರೀತಿ ಮತ್ತು ಗೌರವ.ಸ್ವಾತಂತ್ರ್ಯವೆಂದರೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಇದು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವನ್ನು ಒಳಗೊಂಡಿದೆ. ನಾವು ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಬೇಕು. ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ರಾಯಬಾಗ ಅಧ್ಯಕ್ಷರಾದ ಉಮೇಶ ಭೂಪಾಲ ಪೋಳ ಹೇಳಿದರು, ಅವರು ರಾಯಬಾಗ ಸರ್ಕಾರಿ ನೌಕರರ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು ತಿಳಿಸುತ್ತಾ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ್ ಕದ್ದು, ರಾಜ್ಯ ಪರಿಷತ್ ಸದಸ್ಯರಾದ ಮಲಿಕಜಾನ್ ಕೊರ್ಬು, ಸಂಘಟನಾ ಕಾರ್ಯದರ್ಶಿ ಕಲ್ಲಪ್ಪ ಗುಡಿಮನಿ, ನಾಮ ನಿರ್ದೇಶಿತ ನಿರ್ದೇಶಕರಾದ ಭಗವಂತ ಮಸಾಲಜಿ, ನಿಂಗಪ್ಪ ಬೀರಣಗಡ್ಡಿ, ಸದಾಶಿವ ಕಾಂಬಳೆ, ಪರಶುರಾಮ ಕುಂಬಾರ, ಸವಿತಾ ಜೋಲಾಪೂರೆ, ಮತ್ತಿತರು ಹಾಜರಿದ್ದರು.