ಚಿಕ್ಕೋಡಿ: ಕರ್ನಾಟಕ ರಾಜ್ಯಾದ್ಯಂತ ಬುಧವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಅದರಂತೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೂ ಶಾಂತಿಯುತ ಮತ್ತು ಸುರಕ್ಷಿತ ಎಸ್ ಎಸ್ ಎಲ್ ಸಿ ಪರೀಕ್ಷೆಯು ನಡೆಯುತ್ತದೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರಾದ ಆರ್ ಸೀತಾರಾಮು ಅವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.ಸೋಮವಾರ ತಮ್ಮ ಉಪ ನಿರ್ದೇಶಕರ ಕಚೇರಿಯಲ್ಲಿ ಪತ್ರಿಕೆ ಗೋಷ್ಠಿಯಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 18.03.2026ರಿಂದ 2.04.2026ರ ವರೆಗೆ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅನುಸರಿಸುವ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕುರಿತು ಮಾಹಿತಿಯನ್ನು ಪತ್ರಕರ್ತರಿಗೆ ತಿಳಿಸಿದರು.ವಿದ್ಯಾರ್ಥಿಗಳು ಸುರಕ್ಷಿತವಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವುದಕ್ಕಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಪ್ರಥಮ ಬಾರಿಗೆ ಎದರಿಸುತ್ತಿದ್ದಾರೆ. ಈ ದೃಷ್ಟಿಯಿಂದ ಶಾಂತಿಯುತ ಮತ್ತು ಸುರಕ್ಷಿತವಾಗಿ ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಿಸಿದ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಜೊತೆಗೆ ಪರೀಕ್ಷಾ ಸಮಯದಲ್ಲಿ ಹತ್ತಿರದ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಿಸುವ ಕುರಿತು ತಿಳಿಸಲಾಗಿದೆ. ಪೊಲೀಸ್ ಬಂದೋಬಸ್ತ್ ಕೆಎಸ್ಆರ್ಟಿಸಿ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಪ್ರತಿದಿನವೂ ಪರೀಕ್ಷೆ ನಡೆಸಲು ಬಂದೋಬಸ್ತ್ ಮಾಡಲಾಗಿದೆ ಜೊತೆಗೆ ಎಲ್ಲಾ ಪಕ್ಷ ಕೇಂದ್ರಗಳಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯ ಅಡಿಯಲ್ಲಿ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಬಿಸಿಯುಟದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದು ತಿಳಿಸಿದರು.2025-2026ನೇ ಸಾಲಿನಲ್ಲಿ ಒಟ್ಟು 621 ಪ್ರೌಢಶಾಲೆಗಳಿದ್ದು ಅದರಲ್ಲಿ 240 ಸರ್ಕಾರಿ 152 ಅನುದಾನಿತ 229 ಅನುದಾನ ರಹಿತ ಶಾಲೆಯ ಮಕ್ಕಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಈ ಬಾರಿ ಒಟ್ಟು 45,598 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಅದರಲ್ಲಿ 24, 100 ಬಾಲಕರು 21,498 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದಾರೆ.ಈ ಎಲ್ಲ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆಯನ್ನು ಬರೆಯಬೇಕೆಂಬ ಉದ್ದೇಶದಿಂದ 3402 ಸಿಬ್ಬಂದಿ ವರ್ಗಗಳನ್ನು ಪರಿಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. 131 ಪರೀಕ್ಷೆಗಳಲ್ಲಿ ಸಿಸಿಟಿವಿ ಮತ್ತು ರೆಡ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ಸುಗಮ ನಿರ್ವಹಣೆಗೆ ಒಟ್ಟು 131 ಮುಖ್ಯ ಅಧೀಕ್ಷಕರು 65 ಉಪ ಅಧೀಕ್ಷಕರು 131 ಸ್ಥಾನವಿಕ ಜಾಗೃತ ದಳ ಸಂಖ್ಯೆ ಹಾಗೂ ತಾಲೂಕು ಹಂತದ ಸ್ಕಾಡ ತಂಡ 24 ವೆಬ್ಕಾಸ್ಟಿಂಗ್ ಬೇಸಿಕ್ ವೀಕ್ಷಕರು 23 ಜಿಲ್ಲಾಅಂತ ತನಿಖಾ ದಂಡ 4 ಹಾಗೂ 2134 ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸಲಿವೆ ಎಂದು ವಿವರವಾಗಿ ಮಾಹಿತಿ ನೀಡಿದ್ದರು. ಶೈಕ್ಷಣಿಕ ಜಿಲ್ಲೆ ನಡೆಯುವ ಪರೀಕ್ಷೆಗೆ ಕೆ ಎಸ್ ಆರ್ ಟಿ ಸಿ ಮತ್ತು ಪೊಲೀಸ್ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು 24*7 ಕಾರ್ಯವನ್ನು ನಿರ್ವಹಿಸಿದ್ದಾರೆ. ಇವರೆಲ್ಲರ ಪರಿಶ್ರಮದಿಂದ ಹಾಗೂ ನಮ್ಮ ಶೈಕ್ಷಣಿಕ ಜಿಲ್ಲೆಯ ಶಿಕ್ಷಕರ ಮತ್ತು ಪೋಷಕರ ಪರಿಶ್ರಮದಿಂದ ಕಳೆದ ಬಾರಿ 26ನೇ ಸ್ಥಾನದಲ್ಲಿ ಇದ್ದ ನಮ್ಮ ಫಲಿತಾಂಶ ಈ ಬಾರಿ 10 ಒಳಗಡೆ ಬರುತ್ತದೆ ಎಂದು ನಿರೀಕ್ಷೆ ಇದೆ ಎಂದು ತಿಳಿಸಿದರು. 625ಕ್ಕೆ 625 ಪಡೆಯುವ ವಿದ್ಯಾರ್ಥಿಗಳು ಈ ಬಾರಿ ನಮ್ಮ ಶೈಕ್ಷಣಿಕ ಜಿಲ್ಲೆಯಲ್ಲಿ ಓದುವ ಮನೆಯ ಪ್ರೇರಣೆಯಿಂದ ಫಲಿತಾಂಶ ಬರಲಿದೆ. ಜೊತೆಗೆ ಪೂರ್ವಭಾವಿ ಪರೀಕ್ಷೆಯಲ್ಲಿ ಅಂತಂತವಾಗಿ ಫಲಿತಾಂಶವು ಸುಧಾರಣೆಗೊಂಡ ಕಾರಣದಿಂದ ಈ ಬಾರಿ ನಮ್ಮ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶವನ್ನು ನಿರೀಕ್ಷೆ ಮಾಡುತಿದ್ದೇವೆ ಎಂದು ಪತ್ರಕರ್ತರಿಗೆ ತಿಳಿಸಿದರು. ಪತ್ರಿಕೆಗೋಷ್ಠಿಯಲ್ಲಿ ಡಯಟಿನ ಪ್ರಾಂಶುಪಾಲರು ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿಯಾದ ಖಾಡೆ ಅವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪಡೆದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸಂಯುಕ್ತ ಕರ್ನಾಟಕದ ವರದಿಗಾರರಾದ ಸಂಜಯ್ ಕಾಂಬಳೆ ಅವರಿಗೆ ಸನ್ಮಾನ ಮಾಡಿ ಅಭಿನಂದಿಸಲಾಯಿತು.

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಕ್ಕೇರಿ : ಜುಲೈ 29 – ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸುಟ್ಟು ಸುಮಾರು ₹25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ರಾಮಪ್ಪ ಲಕ್ಷ್ಮಣ ಮಗದುಮ್ಮ ಅವರ ಮನೆಗೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬ ಸಂಪೂರ್ಣವಾಗಿ ಬೀದಿಗೆ ಬಿದ್ದಿದೆ ಎಂದು ನೊಂದವರು ದೂರಿದ್ದಾರೆ.ಘಟನೆಯು ಸಂಭವಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬುದು ಸ್ಥಳೀಯರ ಆಕ್ರೋಶ. "ಇನ್ನಾದರೂ ಅಧಿಕಾರಿಗಳು ನೊಂದವರಿಗೆ ನೆರವಾಗಬೇಕು," ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ. ಕಾಂಬಳೆ ಅವರು ಖಂಡಿಸಿದ್ದಾರೆ.ಈ ವಿಚಾರ ತಿಳಿದ ಧ್ವನಿ ಸಂಘಟನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸ್ಥಳಕ್ಕೆ ತಕ್ಷಣ ದೌಡಾಯಿಸಿ ನೊಂದ ಕುಟುಂಬಕ್ಕೆ ದಿನಸಿ, ಬಟ್ಟೆ, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಡಾ. ರವಿ ಬಿ ಕಾಂಬಳೆ, ತಾಲೂಕಾ ಉಪಾಧ್ಯಕ್ಷ ಸಂತೋಷ ಪಾಟೀಲ, ಕಾರ್ಯದರ್ಶಿ ಶಾಂತಿನಾಥ ಮಗದುಮ್ಮ ಹಾಗೂ ಖಜಾಂಚಿ ಮಹಾಂತೇಶ ಬೇವಿಕಟ್ಟಿ ಉಪಸ್ಥಿತರಿದ್ದರು. ವರದಿ : ಸಂತೋಷ್ ಪಾಟೀಲ್, ಹುಕ್ಕೇರಿ.

ಹುಕ್ಕೇರಿ : ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮ ಪಂಚಾಯತ ಸಭಾ ಭವನ ಕಟ್ಟಡ ಉದ್ಘಾಟನಾ ಸಮಾರಂಭ ಜರಗಿತು 15ನೇ ಹಣಕಾಸು ಯೋಜನೆ ಅಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಸಭಾ ಭವನ ಕಟ್ಟಡದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಹೈಷಿಕೇಶಾನಂದ ಬಾಬು ಮಹಾರಾಜರು ಮದಿಹಳ್ಳಿ ಹಾಗೂ ಶ್ರೀ ವಾಮನದೇವರು ಮದಿಹಳ್ಳಿ ಉದ್ಘಾಟಕರಾದ ಶ್ರೀ ಟಿ ಆರ್ ಮಲ್ಲಾಡದ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಹುಕ್ಕೇರಿ ಹಾಗೂ ಶ್ರೀಮತಿ ಲಕ್ಕವ್ವ ಬಾಳಪ್ಪ ಬಾಗಿ ಅಧ್ಯಕ್ಷರು ಗ್ರಾಮ ಪಂಚಾಯತ ಮುದಿಹಳ್ಳಿ ಶ್ರೀಮತಿ ಕೋಮಲ ಬಸವರಾಜ್ ಹೊಸಮನಿ ಉಪಾಧ್ಯಕ್ಷರು ಹಾಗೂ ಶ್ರೀ ಸುರೇಶ್ ತಳವಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತ್ ಮದಿಹಳ್ಳಿ ಇವರ ಅಮೃತ ಹಸ್ತದಿಂದ ಉದ್ಘಾಟನಾ ಸಮಾರಂಭ ಜರುಗಿತು ಈ ಸಮಾರಂಭದಲ್ಲಿ ಶ್ರೀಮತಿ ಲಕ್ಕವ್ವಾ ಬಾಳಪ್ಪ ಬಾಗಿ ಅಧ್ಯಕ್ಷರು. ಸದಸ್ಯರಾದ ಹಸನ್ ರಾಜೇಸಾಬ್ ಸನದಿ. ಶ್ರೀ ಶಿವಾಜಿ ಶೆಟ್ಟೆಪ್ಪ ಗಾಡಿವಡ್ಡರ್. ಶ್ರೀ ಕಾಶಿನಾಥ್ ಓಮಣ್ಣಾ ಮುತಗಿ. ಸದ್ದಾಂ ಮಲಿಕ್ ಬಳಿಗಾರ. ಗಣಪತಿ ಮುರಾರಿ ವಾಳಕಿ. ಶ್ರೀಮತಿ ಶೋಭಾ ಶಿವಾನಂದ ಖಾನಾಪುರಿ. ಶ್ರೀಮತಿ ಶಂಕರವ್ವ ಬೋರಪ್ಪ ತಳವಾರ. ಶ್ರೀಧರ್ ಕಾಡಪ್ಪ ಚೌಗಲಾ. ಕೆಂಪಣ್ಣಾ ಚೌಗಲಾ. ಸತ್ಯಪ್ಪ ಶಿವಲಿಂಗ ಮಾದರ. ಗುರುಸಿದ್ಧ ಬಸವವಂತ ಹಿಡಕಲ್. ಶ್ರೀಮತಿ ದಾನಮ್ಮ ರಮೇಶ್ ಆಲಗೂರಿ. ಶ್ರೀಮತಿ ಶಿವಕ್ಕಾ ಪುಂಡಲೀಕ. ಶ್ರೀಮತಿ ಯಲ್ಲವ್ವ ಮಾರುತಿ ಕುರುಬರ. ರವೀಂದ್ರ ಬಾಬು ಚಾಗಲಾ. ಭೀಮ್ ಸೇನ್ ಬಾಗಿ.ಡಾ.ಕಾಡೇಶ ಹೊಸಮನಿ. ಅಂಬರೀಶ್ ಬನ್ನಕಗೋಳ. ಮಲ್ಲಿಕಾರ್ಜುನ್ ಗೋಟೂರಿ. ಸಂತೋಷ್ ಪಾಟೀಲ್. ಸದಾ ಬಾಗಿ. ಮಲ್ಲಪ್ಪ ಮಾಣಗಾವಿ. ಸುಲ್ತಾನ್ ಸನದಿ. ಶಿವಪ್ಪ ಮುತ್ತಗಿ. ಸಂಜು ಗಾಯಕವಾಡ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಿಬ್ಬಂದಿ ವರ್ಗದವರು ಮದಿಹಳ್ಳಿ ಶಿರಗಾಂವ ಎಸ್ ಡಿ ಎಮ್ ಸಿ ಅಧ್ಯಕ್ಷರು ಸರ್ವ ಸದಸ್ಯರು ಮದಿಹಳ್ಳಿ ಮತ್ತು ಶಿರಗಾವ್ ಗ್ರಾಮದ ಊರಿನ ಗುರು ಹಿರಿಯರು ಮುಖಂಡರು ಮಹಿಳೆಯರು ಉಪಸ್ಥಿತರಿದ್ದರು. ವರದಿ : ಸಂತೋಷ ಪಾಟೀಲ್, ಹುಕ್ಕೇರಿ.

ರಾಯಬಾಗ : ಇಂದು ನಾವು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. 1947 ರ ಆಗಸ್ಟ್ 15 ರಂದು ನಾವು ಬ್ರಿಟಿಷರ ಆಳ್ವಿಕೆಯಿಂದ ಸ್ವಾತಂತ್ರ್ಯ ಪಡೆದ ದಿನವನ್ನು ಸ್ಮರಿಸುತ್ತೇವೆ. ಈ ದಿನವನ್ನು ಆಚರಿಸುವಾಗ, ನಾವು ನಮ್ಮ ದೇಶಕ್ಕಾಗಿ ಹೋರಾಡಿದ ಎಲ್ಲ ಮಹಾನ್ ನಾಯಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುತ್ತೇವೆ.ಭಾರತವು ಒಂದು ಬೃಹತ್ ಮತ್ತು ವೈವಿಧ್ಯಮಯ ದೇಶ. ನಾವು ಅನೇಕ ಭಾಷೆಗಳು, ಸಂಸ್ಕೃತಿಗಳು ಮತ್ತು ಧರ್ಮಗಳನ್ನು ಹೊಂದಿದ್ದೇವೆ, ಆದರೆ ನಾವು ಒಂದೇ ರಾಷ್ಟ್ರದ ಭಾಗವಾಗಿದ್ದೇವೆ. ನಮ್ಮೆಲ್ಲರನ್ನೂ ಒಂದುಗೂಡಿಸುವ ಅಂಶವೆಂದರೆ ನಮ್ಮ ದೇಶದ ಮೇಲಿನ ಪ್ರೀತಿ ಮತ್ತು ಗೌರವ.ಸ್ವಾತಂತ್ರ್ಯವೆಂದರೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಇದು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯವನ್ನು ಒಳಗೊಂಡಿದೆ. ನಾವು ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಶ್ರಮಿಸಬೇಕು. ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ರಾಯಬಾಗ ಅಧ್ಯಕ್ಷರಾದ ಉಮೇಶ ಭೂಪಾಲ ಪೋಳ ಹೇಳಿದರು, ಅವರು ರಾಯಬಾಗ ಸರ್ಕಾರಿ ನೌಕರರ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ 79ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು ತಿಳಿಸುತ್ತಾ ಮಾತನಾಡಿದರು, ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ್ ಕದ್ದು, ರಾಜ್ಯ ಪರಿಷತ್ ಸದಸ್ಯರಾದ ಮಲಿಕಜಾನ್ ಕೊರ್ಬು, ಸಂಘಟನಾ ಕಾರ್ಯದರ್ಶಿ ಕಲ್ಲಪ್ಪ ಗುಡಿಮನಿ, ನಾಮ ನಿರ್ದೇಶಿತ ನಿರ್ದೇಶಕರಾದ ಭಗವಂತ ಮಸಾಲಜಿ, ನಿಂಗಪ್ಪ ಬೀರಣಗಡ್ಡಿ, ಸದಾಶಿವ ಕಾಂಬಳೆ, ಪರಶುರಾಮ ಕುಂಬಾರ, ಸವಿತಾ ಜೋಲಾಪೂರೆ, ಮತ್ತಿತರು ಹಾಜರಿದ್ದರು.